ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲು ನಿರ್ಧರಿಸಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ. ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ತಮಿಳುನಾಡಿನ ಕೆ ವಸಂತ ಮತ್ತು ಕೇರಳದ ಟಿಎನ್ ಜೀಶಾ ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲಿದ್ದಾರೆ. ಇನ್ನೂ ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ.
Heart Health: ನಿಮಗೆ ಹೃದಯದ ಸಮಸ್ಯೆ ಇದೆಯಾ..? ಹಾಗಾದ್ರೆ ವಾರಕ್ಕೆ ಎರಡು ಬಾರಿ ಮೀನು ತಿನ್ನಿ ಸಾಕು
ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು. ಆದ್ರೆ, ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.
ನಕ್ಲರಿಗೆ ಪ್ಯಾಕೇಜ್ ಘೋಷಣೆ
ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.
ಕೆಟಗರಿ ಎ: ನಮ್ಮ ರಾಜ್ಯದವರೇ ಆಗಿದ್ದು, ಆಕ್ಟಿವ್ ಆಗಿರುವಾಗ ಕೇಸ್ ಇದ್ದು ಶರಣಾಗತಿಯಾಗುತ್ತಿದ್ದರೆ 7.50 ಲಕ್ಷ ರೂ. ಹಣ ಸಿಗುತ್ತದೆ.
ಕೆಟಗರಿ ಬಿ: ನಕ್ಸಲರು ಹೊರರಾಜ್ಯದವನಾಗಿದ್ದು, ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೆ 4 ಲಕ್ಷ ರೂ. ಪ್ಯಾಕೇಜ್ ಸಿಗುತ್ತದೆ.
ಕೆಟಗರಿ ಸಿ: ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿ, ಪ್ರಕರಣಗಳು ಇದ್ದರೆ 2 ಲಕ್ಷ ರೂ. ಹಣವನ್ನು ಸರ್ಕಾರ ನೀಡಲಿದೆ.
ಶರಣಾಗುವ ನಕ್ಸಲರು ಯಾರು?
- . ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
- ವನಜಾಕ್ಷಿ (ಬಾಳೆಹೊಳೆ ಕಳಸ)
- ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
- ಮಾರಪ್ಪ ಅರೋಳಿ (ರಾಯಚೂರು)
- ವಸಂತ ಟಿ (ತಮಿಳುನಾಡು)
- ಎನ್. ಜೀಶಾ (ಕೇರಳ)