ಬೆಂಗಳೂರು:- ಮುಡಾ ಕೇಸ್ ತನಿಖೆಗೆ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರು, ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಸಿದ್ದರು. ಇದಾದ ಬಳಿಕ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರ ಸಿಬಿಐ ನೇರ ಪ್ರವೇಶಕ್ಕೆ ಬ್ರೇಕ್ ಹಾಕೋ ನಿರ್ಧಾರ ಕೈಗೊಳ್ಳಲಾಗಿದೆ.
ಬಿಜೆಪಿಯ ರಕ್ತದಲ್ಲಿ ಕೋಮುವಾದದ ಜೊತೆ ಆಂತರಿಕ ಕಲಹವೂ ಸೇರಿದೆ: CM ಸಿದ್ದರಾಮಯ್ಯ!
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಸಚಿವ ಸಂಪುಟ ಸದಸ್ಯರು ತೀರ್ಮಾನಿಸಿದ್ದಾರೆ. ಭವಿಷ್ಯದಲ್ಲಿ ಈ ಪ್ರಕರಣಕ್ಕೆ ಸಿಬಿಐ ಕೂಡ ಎಂಟ್ರಿಯಾಗಬಹುದು. ಹೀಗಾಗಿ ಸಿಬಿಐ ಭೀತಿಯಿಂದ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸಿಬಿಐ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ನಿರ್ಧಾರ ಮಾಡಿದೆ. ಈ ಹಿಂದೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ನೇರವಾಗಿ ಸಿಬಿಐ ತನಿಖೆ ನಡೆಸಲು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯಿದೆ 1946ರ ಅಡಿ ಸರ್ಕಾರ ಅವಕಾಶ ನೀಡಿತ್ತು. ಇದೀಗ ಸಿಬಿಐ ಮುಕ್ತ ತನಿಖೆಗೆ ಇದ್ದ ಕಾಯ್ದೆಯನ್ನು ವಾಪಸ್ ಪಡೆಯಲಾಗಿದೆ. ಆ ಮುಕ್ತ ಅವಕಾಶದ ಬಿಲ್ ವಾಪಸ್ಗೆ ನಿರ್ಧಾರ ಮಾಡಲಾಗಿದೆ.
ರಾಜ್ಯದಲ್ಲಿ ಮುಡಾ ಹಾಗೂ ವಾಲ್ಮೀಕಿ ಪ್ರಕರಣ ಸಖತ್ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರ ಯಾವುದೇ ಸಂದರ್ಭದಲ್ಲಿ ಸಿಬಿಐ ಅನ್ನ ದುರ್ಬಳಕೆ ಮಾಡಿಕೊಳ್ಳಬಹುದೆಂಬ ಭೀತಿ ಸರ್ಕಾರಕ್ಕಿದೆ. ಇದರ ಸುಳಿವು ಅರಿಯುತ್ತಿದ್ದಂತೆ ರಾಜ್ಯ ಸರ್ಕಾರ ಈ ಹೆಜ್ಜೆ ಇಟ್ಟಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿಬಿಐ ನೇರ ಪ್ರವೇಶಕ್ಕೆ ಬ್ರೇಕ್ ಹಾಕಲಾಗುತ್ತಿದೆ.