ಹುಬ್ಬಳ್ಳಿ : ರಾಜ್ಯ ಸರ್ಕಾರದ ವಿರುದ್ದ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಗಂಭೀರ ಆರೋಪ ಮಾಡಿದ್ದಾರೆ. ಹೌದು ಒಳಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಮಹಾಮೋಸ, ಅಸ್ಪೃಶ್ಯ ಜನಾಂಗಕ್ಕೆ ಮಹಾ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,
ಸಿದ್ದರಾಮಯ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಸಂವಿಧಾನದ ಕಲಂ 341ನ್ನು ತಿದ್ದುಪಡಿ ಮಾಡಲು ಶಿಫಾರಸು ಮಾಡಿದೆ. ಇದು ನಿಜಕ್ಕೂ ಮಹಾ ಮೋಸ ಎಂದು ತಿಳಿಸಿದೆ ಎಂದರು. ಸಂವಿಧಾನ ತಿದ್ದುಪಡಿ ಮಾಡುವ ಅಗತ್ಯವಿಲ್ಲ ಎಂದು ಈಗಾಗಲೇ ಅಂದರೆ 2020ರಲ್ಲೇ ಸುಪ್ರೀಂಕೋರ್ಟ್ ನ್ಯಾ.ಅರುಣಕುಮಾರ್ ಮಿಶ್ರಾ ಅವರು ಆದೇಶ ಮಾಡಿದ್ದಾರೆ.
Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!
ಅದರ ಅನುಗುಣವಾಗಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಮತ್ತು ಎಸ್ಟಿ ಜನಾಂಗದ ಮೀಸಲಾತಿ ಹೆಚ್ಚಿಸಿ ಎಸ್ಸಿ ಮೀಸಲಾತಿ 15ರಿಂದ 17, ಎಸ್ಟಿ ಮೀಸಲಾತಿ 3ರಿಂದ 7ಕ್ಕೆ ಹೆಚ್ಚಿಸಿ ಕಳೆದ ವರ್ಷವೇ ಆದೇಶ ಮಾಡಿತ್ತು. 2022ರ ನವೆಂಬರ್ 1ರಿಂದ ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಆದೇಶ ಜಾರಿಗೆ ಬಂದಿದೆ. ಅನುಷ್ಠಾನ ಕೂಡ ಆಗಿದೆ ಎಂದಿದ್ದಾರೆ.