ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು. ಇದರ ಹೊಣೆ ಹೊತ್ತ ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ಬೆಂಗಳೂರಿನ ಸಿಬಿಐ ಕಚೇರಿಗೆ ದೂರು ಕೊಟ್ಟಿದೆ. ಅದರನ್ವಯ ಸಿಬಿಐ ತನಿಖೆ ನಡೆಯಲಿ ಎಂದೂ ಒತ್ತಾಯಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ದೂರಿದರು. ನಕಲಿ ಖಾತೆ ತೆರೆದು, ಕ್ರಿಯಾ ಯೋಜನೆ ಇಲ್ಲದೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಟೀಕಿಸಿದರು.
Job Alert: ಡಿಗ್ರಿ ಆಗಿದ್ರೆ ಸಾಕು.. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ʼನಲ್ಲಿದೆ ಉದ್ಯೋಗಾವಕಾಶ.!
ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ವಾಲ್ಮೀಕಿ ನಿಗಮದ ಈ ಅವ್ಯವಹಾರವು ಪರಿಶಿಷ್ಟ ಪಂಗಡಕ್ಕೆ ಆಗಿರುವ ಅನ್ಯಾಯ ಎಂದು ತಿಳಿಸಿದರು. ನೇರ ಹೊಣೆಯಾಗಿರುವ ಮುಖ್ಯಮಂತ್ರಿಗಳಿಗೆ ಇನ್ನೂ ಧ್ವನಿಯೇ ಬಂದಿಲ್ಲ. ಎಲ್ಲಿ ಧ್ವನಿ ಅಡಗಿ ಹೋಗಿದೆಯೋ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.
ಹಣ ತೆಲಂಗಾಣದ ಯಾರ ಖಾತೆಗೆ ಹೋಗಿದೆ? ಯಾರು ಆ ವ್ಯಕ್ತಿಗಳು? ಎಂದ ಅವರು, ನಾಗೇಂದ್ರರು ಹಣವನ್ನು ನೇರವಾಗಿ ದರೋಡೆ ಮಾಡಿದ್ದಾಗಿ ಆಪಾದಿಸಿದರು. ದಾಖಲಾದ ಎಫ್ಐಆರ್ನಲ್ಲಿ ಮಂತ್ರಿ ಮೇಲೆ ಕೇಸಿಲ್ಲ; ಅಧಿಕಾರಿ ಮೇಲೆ ಕೇಸಿಲ್ಲ. ಬರೀ ಬ್ಯಾಂಕ್ ಅಧಿಕಾರಿ ಮೇಲೆ ಪ್ರಕರಣ ದಾಖಲಾಗಿದೆ. ಇದೇನು ಇಲಾಖೆ? ಎಂಥ ಕಾಮಿಡಿ ಇದು? ಇದು ಭಂಡತನದಿಂದ ಕೂಡಿದೆ ಎಂದು ದೂರಿದರು.