ಕೋಲಾರ;- ಭೀಕರ ಬರದಿಂದ 3 ತಿಂಗಳಲ್ಲಿ 250 ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ನವಂಬರ್ನಲ್ಲಿಯೇ ಬರದ ಭೀಕರತೆ ಅನುಭವಕ್ಕೆ ಬರುತ್ತಿದೆ. ಇನ್ನು ಮುಂದಿನ ದಿನಗಳ ಬಗ್ಗೆ ಭಯ ಕಾಡುತ್ತಿದೆ. ಈಗ ರೈತರ ನೆರವಿಗೆ ಬರಬೇಕಾದ್ದು ಸರ್ಕಾರದ ಕರ್ತವ್ಯ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಮನೆಯ ಪೀಠೋಪಕರಣ ಖರೀದಿಗೆ 3 ಕೋಟಿ ರೂ. ಖರ್ಚು ಮಾಡಿದ್ದಾರೆ. 2013 ರಿಂದ 2018ರವರಗೆ 4,256 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇವರೇ ಹೇಳುತ್ತಾರೆ. ಈಗ ಮೂರು ತಿಂಗಳ ಅವಧಿಯಲ್ಲಿ 250 ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾಹಿತಿ ನೀಡಿದರು.
ರಾಜ್ಯ ಸರ್ಕಾರದ ತಾಳ ತಪ್ಪಿದೆ. ನಾವು ಇವರ ಸರ್ಕಾರ 5 ವರ್ಷ ಇರುತ್ತದೆ ಎಂದುಕೊಂಡಿದ್ದೇವು. ಆದರೆ, ಸರ್ಕಾರ ತಾಳ ತಪ್ಪಿರೋದು ಸ್ಪಷ್ಟವಾಗುತ್ತಿದೆ. ನಮ್ಮಸರ್ಕಾರ ಇದ್ದಾಗ 7 ಗಂಟೆ ತ್ರೀ ಫೇಸ್ ವಿದ್ಯತ್ ನೀಡಿದ್ದೆವು. ಆದರೆ, ಇವರಿಗೆ ಆ ಯೋಗ್ಯತೆ ಇಲ್ಲ. ಕನಿಷ್ಠ 5 ಗಂಟೆಯೂ ವಿದ್ಯುತ್ ನೀಡುತ್ತಿಲ್ಲ. ಕರೆಂಟ್ ಇಲ್ಲದೇ, ಈಗಾಗಲೇ ಶೇ.50ರಷ್ಟು ಬೆಳೆದು ನಿಂತಿರುವ ಬೆಳೆ ಹಾಳಾಗುತ್ತಿದೆ. ನವಂಬರ್ ನಲ್ಲಿಯೇ ಬರದ ಭೀಕರತೆ ಅನುಭವಕ್ಕೆ ಬರುತ್ತಿದೆ.ಇನ್ನು ಮುಂದಿನದಿನಗಳ ಬಗ್ಗೆ ಭಯ ಕಾಡುತ್ತಿದೆ ಎಂದರು.
ಬರದ ಭೀಕರತೆಯ ಭಯ ಕಾಡುತ್ತೊರುವ ಸಂದರ್ಭದಲ್ಲಿ ರೈತರ ನೆರವಿಗೆ ಬರಬೇಕಾದ್ದು ಸರ್ಕಾರದ ಕರ್ತವ್ಯ. ಆದರೆ ಆ ಮುನ್ಸೂಚನೆ ಸರ್ಕಾರದಿಂದ ಕಾಣುತ್ತಿಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಮನೆಯ ಪೀಠೋಪಕರಣ ಖರೀದಿಗೆ 3 ಕೋಟಿ ರೂ. ಖರ್ಚು ಮಾಡಿದ್ದಾರೆ. ರಾಜ್ಯದ ಜನ ಸಂಕಷ್ಟದಲ್ಲಿ ಮುಖ್ಯಮಂತ್ರಿ ಸಂತಸದ ಹೆಜ್ಜೆ ಹಾಕುತ್ತಾರೆ. ಎರಡನೇ ಭಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರು ಟಮಟೆಗೆ ತಕ್ಕಂತೆ ಹೆಜ್ಜೆ ಹಾಕುತ್ತಾರೆ ಎಂದು ಕಿಡಿಕಾರಿದರು.