ಕೋಲಾರ : ವಿಶೇಷ ಘಟಕ ಯೋಜನೆಯಡಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪರ ಉತ್ಸವದ ಮೆರವಣಿಗೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ ನೀಡಿದರು. ನಗರದ ಬಂಗಾರಪೇಟೆ ವೃತ್ತದಲ್ಲಿ ಕಲಾ ತಂಡಗಳ ಮೆರವಣಿಗೆ ಕಹಳೆ ಊದುವ ಮೂಲಕ ಜನಪರ ಉತ್ಸವ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿ
ಶೇಷ ಘಟಕ ಯೋಜನೆಯಡಿ ನಡೆಯುತ್ತಿರುವ ಜನಪರ ಉತ್ಸವ ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಅನೇಕ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದವು. ಉತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಅಪರ ಜಿಲ್ಲಾಧಿಕಾರಿ ಮಂಗಳ ಉಪವಿಭಾಗಧಿಕಾರಿ ಮೈತ್ರಿ, ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.