ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್ ಅವರಿಂದು ಬೆಳಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಮೂಲಗಳು ತಿಳಿಸಿವೆ. ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್ ಜಾರಿಗೊಳಿಸಿತ್ತು.