ಬೆಂಗಳೂರು:- ಬಿಜೆಪಿಗೆ ಮುಸ್ಲಿಂ ಮತ ಬೇಡ ಎಂಬ ಹೇಳಿಕೆ ನೀಡಿದ್ದ ಮಾಜಿ ಸಚಿವ ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ , ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣ ದಾಖಲಾಗಿದ್ದಾಗ ಅರ್ಜಿದಾರರು ಹಾಲಿ ಶಾಸಕರಾಗಿದ್ದರು. ಹಾಗಾಗಿ ಜನಪ್ರತಿನಿಧಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಲು ಮ್ಯಾಜಿಸ್ಟ್ರೇಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ಅದರಂತೆ ಪೊಲೀಸರು ಪಡೆದುಕೊಂಡ ಅನುಮತಿ ಊರ್ಜಿತವಾಗುವುದಿಲ್ಲ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 125ರ ಉಲ್ಲಂಘನೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಶಿವಮೊಗ್ಗದ ಮ್ಯಾಜಿಸ್ಟ್ರೇಟ್ನಿಂದ ಅನುಮತಿ ಪಡೆದು ದಾಖಲಿಸಿಕೊಂಡಿರುವ ಎಫ್ಐಆರ್ ಆಧರಿಸಿ ನಡೆದ ತನಿಖೆಯ ಅಂತಿಮ ವರದಿಯನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯಕ್ಕೆ ಸಲ್ಲಿಸಲಾಗಿದೆ. ಖಾಸಗಿ ಸುದ್ದಿ ಸಂಸ್ಥೆಯ ಎಕ್ಸ್ ಖಾತೆಯಲ್ಲಿ ಬಂದ ಮಾಹಿತಿ ಆಧರಿಸಿ ದೂರು ದಾಖಲಿಸಲಾಗಿದೆ. ಉಳಿದಂತೆ ಪ್ರಕರಣದಲ್ಲಿ ಯಾವುದೇ ಬಲವಾದ ಸಾಕ್ಷಿ-ಪುರಾವೆಗಳಿಲ್ಲ. ಆದ್ದರಿಂದ ಇಂತಹ ಪ್ರಕರಣದ ತನಿಖೆ ಕಾನೂನಿನ ದುರ್ಬಳಕೆ ಆಗಲಿದ್ದು, ಪ್ರಕರಣ ರದ್ದುಪಡಿಸಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು