ನವದೆಹಲಿ: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದೆ.
ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದೆ. ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನತೆ ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಹೇಳಿದ್ದಾರೆ.
Money Making Tips: ತಿಂಗಳಿಗೆ 1500 ರೂಪಾಯಿ ಉಳಿಸಿ, 31 ಲಕ್ಷ ಗಳಿಸಿ! ಬೊಂಬಾಟ್ ಸ್ಕೀಮ್ ಇದು!
ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕೂಡ ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ.