ರಾಜ್ಯಾದ್ಯಂತ ಕಾಟೇರ ಸಿನಿಮಾದ ಅಬ್ಬರ ಜೋರಾಗಿದೆ. ಸಿನಿಮಾ, ನಟನೆ, ಸಂಭಾಷಣೆ, ನಿರ್ದೇಶನ ಹೀಗೆ ಎಲ್ಲದರಲ್ಲೂ ಸಿನಿಮಾ ಪಾಸ್ ಅನಿಸಿಕೊಂಡಿದೆ. ಅದರಲ್ಲೂ ದರ್ಶನ್ ಅಭಿಮಾನಿಗಳು ಚಿತ್ರವನ್ನು ತಲೆಮೇಲೆ ಹೊತ್ತುಕೊಂಡು ಮೆರೆಸುತ್ತಿದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಸ್ (Celebrities)ಎಂದು ಕರೆಯುವ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ ಆಶೀರ್ವಾದಕ್ಕೆ ಕೊನೆಯೆಲ್ಲಿ. ಧನೋಸ್ಮಿ ಸೆಲೆಬ್ರಿಟಿಸ್. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ಜೀವಾಳದಂತಿರುವ ಅವರ ಮತ್ತೊಂದು ಗೆಟಪ್ ಫೋಟೋವನ್ನು ಹಂಚಿಕೊಂಡಿದ್ದಾರೆ.
ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.