ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ಅದರಂತೆ ರೆಡ್ ಜೋನ್ ಜಿಲ್ಲೆಯಾಗಿರುವ ಬೆಂಗಳೂರು ನಗರದಲ್ಲಿ 1 ರಿಂದ 9 ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಹೀಗಾಗಿ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ವಿಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಅಲ್ಲದೇ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಬಗ್ಗೆ ಗಮನಹರಿಸಲು ನಿರ್ದೇಶನ ನೀಡಲಾಗಿದೆ ಎಂದು ಹೇಳಲಾಗಿದೆ.
