ಬೆಂಗಳೂರು : ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಅಂತ ಹೆಸರಿಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಮಾವೇಶದಲ್ಲಿ ಮಾತನಾಡಿ, ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ನರೇಂದ್ರ ಮೋದಿ ಅವರು ಎಂದು ಕುಟುಕಿದರು.
BIGG News: ದಳಪತಿಗಳಿಗೆ ಮಣಿದ ಬಿಜೆಪಿ ಹೈಕಮಾಂಡ್: ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲು!
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಪ್ರಶ್ನಿಸಿದರು.
BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ!
ನಾವು ಬಿಜೆಪಿ ಅವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ ಎಂದು ಹೇಳಿದರು.
ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸಿ ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಬೇಕು. ಬಿಜೆಪಿಯ ಸುಳ್ಳುಗಳಿಗೆ ಸತ್ಯದ ದಾಖಲೆಗಳನ್ನು ಮಂಡಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.