ಬೆಳಗಾವಿ: ಕ್ರಿಮಿನಾಶಕ ಕುಡಿದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ್ ಕಲ್ಲಪ್ಪ ಕೊಪ್ಪದ (23) ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಮಾರ್ಕೆಟ್ ಠಾಣೆ ಪೊಲೀಸರು ಕ್ರಿಮಿನಾಶಕ ಕುಡಿದು ಅಸ್ವಸ್ಥನಾಗಿದ್ದ ಕುಮಾರನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ಐಸಿಯುದಲ್ಲಿ ಚಿಕಿತ್ಸೆ ಮುಂದುವರಿದಿದೆ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಆರೋಗ್ಯ ಸಮಸ್ಯೆಯಿಂದ ಯುವಕ ಬಳಲುತ್ತಿದ್ದ ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.