ಬೆಂಗಳೂರು: ಬೇಳೆ-ಕಾಳು (Togari Sorghum) ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸೂಚಿಸಿದ್ದಾರೆ.
ಗ್ರಾಹಕ ವ್ಯವಹಾರಗಳ ಸಚಿವಾಲಯದ (Ministry of Consumer Affairs) ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.
https://ainlivenews.com/fear-of-rat-fever-between-dengue-and-chicken-gunya/
ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ (Chana Dal), ಉದ್ದು (Urad Dal) ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.
ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದೂ ಸಚಿವರು ಹೇಳಿದರು.