ಬೆಂಗಳೂರು:- ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ಬೆನ್ನಿಗೆ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಪೊಲೀಸರ ಬೆನ್ನಿಗೆ ನಿಂತಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನಿವಾಸದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಮೈಸೂರು ಡಿಸಿ, ಎಸ್ಪಿ ಹಾಗೂ ಮೈಸೂರು ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಕಾರಿಗಳಿಗೆ ನೀಡಿದ್ದಾರೆ.