ಮಂಗಳೂರು:- ಮಂಗಳೂರಿನ ಹೊರವಲಯದ ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.
ರಾಹುಲ್ ಗಾಂಧಿ ಭಾರತದ ನಂ.1 ಟೆರರಿಸ್ಟ್: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ!
ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಎಚ್ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.