ಹಿಟ್ ಮ್ಯಾನ್ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಕ್ಕಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿದ ಭಾರತ ಐತಿಹಾಸಿಕ ಮೂರನೇ ಟ್ರೋಫಿ ಗೆದ್ದುಕೊಂಡಿತು. ಭಾರತದ ಗೆಲುವಿನ ನಂತರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರು ನಿವೃತ್ತಿ ಘೋಷಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ ರೋಹಿತ್ ಮತ್ತು ವಿರಾಟ್ ಗೆಲುವಿನ ನಂತರವೇ ಊಹಾಪೋಹಗಳಿಗೆ ತೆರೆ ಎಳೆದರು.
ಮದ್ಯ ಪ್ರಿಯರಿಗೆ ಬಿಗ್ ಶಾಕ್: ಎಣ್ಣೆ ದರ ಹೆಚ್ಚಳ!? ಅಬಕಾರಿ ಇಲಾಖೆ ಪ್ಲ್ಯಾನ್ ಏನು?
ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ 2025ರ ಟ್ರೋಫಿ ಗೆದ್ದು ಬೀಗಿರುವ ಟೀಮ್ ಇಂಡಿಯಾವು ಮುಂದಿನ ಸರಣಿಗಳಿಗೆ ಸಜ್ಜಾಗುತ್ತಿದೆ. ಪಾಕಿಸ್ತಾನ ಆಯೋಜನೆ ಮಾಡಿದ್ದ ಈ ಟೂರ್ನಿಯಲ್ಲಿ ಪಾಕಿಸ್ತಾನವನ್ನೇ ಮನೆಗೆ ಕಳುಹಿಸಿ ದುಬೈನಲ್ಲಿ ಟ್ರೋಫಿಯ ಎತ್ತುವ ಮೂಲಕ ಭಾರತ ಹಲವು ದಾಖಲೆ ಬರೆದಿದೆ. 1 ಪಂದ್ಯವನ್ನು ಸೋಲದೇ ಅಜೇಯರಾಗಿ ಟ್ರೋಫಿ ಎತ್ತಿರುವುದು ಸುಲಭದ ಮಾತಲ್ಲ.
ಅದರಲ್ಲೂ ಟೂರ್ನಿಯಲ್ಲಿ ಫಾರ್ಮ್ ಗೆ ಮರಳಿರುವ ಹಿರಿಯ ಆಟಗಾರರ ಪ್ರದರ್ಶನ ಅಮೋಘವಾಗಿತ್ತು. ಪಾಕಿಸ್ತಾನ ವಿರುದ್ಧದ ಗೆಲುವಿನಲ್ಲಿ ಶತಕ ಬಾರಿಸಿ ವಿರಾಟ್ ಮಿಂಚಿದರೆ, ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕದ ಹತ್ತಿರ ರೋಹಿತ್ ಬಂದಿದ್ದರು. ಇವರ ಆಟ ಹಾಗೂ ಉತ್ತಮ ಕ್ಯಾಪ್ಟನ್ಸಿನಿಂದ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವುದು ಅಂದರೆ ತಪ್ಪಾಗೋದಿಲ್ಲ.
ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಮೂವರು ಹಿರಿಯ ಆಟಗಾರರು ನಿವೃತ್ತಿ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಭಾರತ ತಂಡ ಫೈನಲ್ಗೇರುತ್ತಿದ್ದಂತೆ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್ಗೆ ಗುಡ್ ಬೈ ಹೇಳುವುದು ಖಚಿತ ಎನ್ನಲಾಗಿತ್ತು..
ಆದರೀಗ ಚಾಂಪಿಯನ್ಸ್ ಟ್ರೋಫಿ ಮುಗಿದಿದೆ. ಟ್ರೋಫಿಯೊಂದಿಗೆ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಮರಳಿದ್ದಾರೆ. ಈ ಮರಳುವಿಕೆಯ ಬೆನ್ನಲ್ಲೇ ನಿವೃತ್ತಿ ವಿಚಾರವಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಮೌನ ಮುರಿದಿದ್ದಾರೆ.
ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ಸದ್ಯಕ್ಕಂತು ನಾನು ಏಕದಿನ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಿಯವರೆಗೆ ಸಾಧ್ಯವೋ ಅಲ್ಲಿತನಕ ನಾನು ಟೀಮ್ ಇಂಡಿಯಾದಲ್ಲಿ ಮುಂದುವರೆಯುತ್ತೇನೆ ಎಂದಿದ್ದಾರೆ. ಈ ಮೂಲಕ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿ ರೋಹಿತ್ ಶರ್ಮಾ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಇನ್ನು ನಿವೃತ್ತಿ ಪ್ರಶ್ನೆಗೆ ವಿರಾಟ್ ಕೊಹ್ಲಿ ಕಡೆಯಿಂದಲೂ ಸ್ಪಷ್ಟ ಉತ್ತರ ದೊರಕಿದೆ. ನಾನು ಸಾಧ್ಯವಾದಷ್ಟು ಕ್ರಿಕೆಟ್ ಆಡಲು ಬಯಸುತ್ತೇನೆ. ನನ್ನ ಆಟವನ್ನು ಮತ್ತಷ್ಟು ಸುಧಾರಿಸಲು ಮತ್ತು ಸಾಧ್ಯವಾದಷ್ಟು ಮುಂದಕ್ಕೆ ಹೆಜ್ಜೆಯಿಡಲು ಪ್ರಯತ್ನಿಸುತ್ತೇನೆ. ಅಲ್ಲದೆ ಟೀಮ್ ಇಂಡಿಯಾವನ್ನು ಉತ್ತಮ ಸ್ಥಾನದಲ್ಲಿರಿಸಿದ ಬಳಿಕವಷ್ಟೇ ನಿವೃತ್ತರಾಗುವುದಾಗಿ ಕೊಹ್ಲಿ ಹೇಳಿದ್ದಾರೆ.
ರವೀಂದ್ರ ಜಡೇಜಾ ಕೂಡ ಸದ್ಯಕ್ಕಂತು ನಿವೃತ್ತನಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ನಾನು ಏಕದಿನ ಕ್ರಿಕೆಟ್ಗೆ ವಿದಾಯ ಹೇಳಲಿದ್ದೇನೆ ಎಂಬ ವದಂತಿಗಳನ್ನು ಯಾರು ಸಹ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಜಡೇಜಾ ಕೂಡ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿದ್ದಾರೆ.