ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದೆ ಅಂತ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ..ಕಲಬುರಗಿಯಲ್ಲಿಂದು ಮಾತನಾಡಿದ ಖರ್ಗೆ,
ಈಗಾಗಲೇ ಕ್ಷೇತ್ರವಾರು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಇದೇ ವಿಷಯವಾಗಿ ನಾಳೆ ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ಪ್ರಮುಖವಾಗಿ ಚರ್ಚೆ ಆಗಲಿದೆ ಎಂದರು