ವಿಜಯಪುರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಸಿಎಂ ಸ್ಪಷ ಸೂಚನೆ ಕ್ಯಾಬಿನೆಟ್ ನಲ್ಲಿ ಕೊಟ್ಟಿದ್ದಾರೆ. ಕಾನೂನು ಸಚಿವ ಎಚ್ ಕೆ ಪಾಟೀಲ್, ಗೃಹ ಸಚಿವ ಜಿ ಪರಮೇಶ್ವರ್ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಸೂಚನೆ ಕೊಟ್ಟಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳುವುದಲ್ಲದೇ,ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಬಲಿಷ್ಠ ಕಾನೂನು ತರುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಗಂಭೀರ ಚಿಂತನೆ ನಡೆಸಿದ್ದಾರೆ. ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಇನ್ನೂ ನಾನು ಸಿಎಂ ಇದ್ದಾಗ ಮೈಕ್ರೋ ಫೈನಾನ್ಸ್ ಬಗ್ಗೆ ಬಿಲ್ ತಂದಿದ್ದೆ, ಅದು ಏನಾಯ್ತು ಅಂತ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಬಿಲ್ ತಂದಿದ್ದರೇ ಅದರ ಪರಿಣಾಮ ಏನಾಯ್ತು.ಕುಮಾರಸ್ವಾಮಿ ತಂದಿದ್ದ ಬಿಲ್ ವರ್ಕ್ ಆಗ್ತಿಲ್ಲ. ಕಠಿಣ ಕಾನೂನು ತರುತ್ತೇವೆ. ಈ ಬಗ್ಗೆ ನಾನು ಗಂಭೀರವಾಗಿ ಹೇಳುತ್ತಿದ್ದೇನೆ. ಮೈಕ್ರೋ ಫೈನಾನ್ಸ್ ವಿಚಾರವಾಗಿ ನಾನು ಲಘುವಾಗಿ ಮಾತನಾಡಲ್ಲ. ರಾಜ್ಯ ಸರ್ಕಾರ ಕಠಿಣ ಕಾನೂನು ತರುತ್ತದೆ ಎಂದರು.
ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್
ಇದೇ ವೇಳೆ ಸಚಿವ ಎಂ.ಬಿ.ಪಾಟೀಲ್ ವಿಜಯಪುರದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಸದಾಶಿವ ಬಬಲಾದಿ, ಸದಾಶಿವ ಮಾದರ, ಉಮೇಶ್ ಮಾದರ ಕಾರ್ಮಿಕರಿಗೆ ತಲಾ ಐವತ್ತು ಸಾವಿರ ವೈಯಕ್ತಿಕ ಪರಿಹಾರ ವಿತರಿಸಿದರು.
ಬಳಿಕ ಮಾತನಾಡಿ ಜಮಖಂಡಿ ಬಿಎಲ್ ಡಿಇ ಯಲ್ಲಿ ಅಥವಾ ಜಮಖಂಡಿ ಮಾಜಿ ಶಾಸಕ ಆನಂದ್ ನ್ಯಾಮಗೌಡ ಸಕ್ಕರೆ ಕಾರ್ಖಾನೆಯಲ್ಲಿ ಉದ್ಯೋಗ ನೀಡಲಾಗುವುದು.ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯ ಕೊಡಿಸಲಾಗುವುದು. ಇದೊಂದು ಹೇಯ ಕೃತ್ಯ, ಅಮಾನವೀಯ ಘಟನೆ. ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ವಿಳಂಬ ಮಾಡಿದ್ದಾದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.