ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಅತಿಯಾದ ಸುಸ್ತು ಮತ್ತು ಆಯಾಸ ಇದ್ದರೆ ನಿರ್ಲಕ್ಷ್ಯ ಬೇಡ: ಈ ಸುದ್ದಿ ನೀವು ನೋಡಲೇಬೇಕು!
ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.
ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ:
3. ಜಿಲ್ಲೆಗಳ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ, ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದುಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಹೇಳಿದ್ದಾರೆ.