ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಕೇಳಿದಾಗ, “ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ” ಎಂದು ತಿಳಿಸಿದರು.
ಬೃಹತ್ ಮೆರವಣಿಗೆ ಮೂಲಕ ನಾಮಿನೇಷನ್ ಸಲ್ಲಿಸಿದ ಡಿ.ಕೆ.ಸುರೇಶ್: ಯಾರೆಲ್ಲಾ ಸಾಥ್ ಕೊಟ್ರು ?
ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, “ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ತಿಳಿಸಿದರು.
ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂದು ಕೇಳಿದಾಗ, “ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ” ಎಂದು ತಿಳಿಸಿದರು.