ಶಿವಮೊಗ್ಗ: ಮೊಬೈಲ್ ಫೋನ್ ವ್ಯಾಮೋಹ ಯುವತಿಯ ಜೀವಕ್ಕೇ ಕುತ್ತು ತಂದ ಘಟನೆ ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ನಡೆದಿದೆ. ಧನುಶ್ರೀ (೨೦) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಯಾವಾಗಲು ಮೊಬೈಲ್ ನೋಡುವುದರಲ್ಲೇ ಬ್ಯುಸಿಯಾಗಿರುತ್ತಿದ್ದಳು. ಇದನ್ನು ಮನಗಂಡ ತಾಯಿ, ಓದಿನ ಕಡೆ ಗಮನ ಹರಿಸುವಂತೆ ಬುದ್ಧಿಮಾತು ಹೇಳಿದ್ದಾರೆ.
ಇದರಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸೋಮವಾರ ಸಂಜೆ 7 30 ಗೆ ಕಾಲೇಜು ಕಾಲೇಜ್ ಮುಗ್ಸಿ ಮನೆಗೆ ಬಂದಾಗ ಘಟನೆ ನಡೆದಿದ್ದು, ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು!
ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.