ಬೆಂಗಳೂರು: ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್ನಿಂದಲೇ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧೀಸಿದಂತೆ ಆರೋಪಿ ಶಿಕ್ಷಕನನ್ನು ಬಂದಿಸಿಲಾಗಿದೆ. ಅಭೀಷೆಕ್ ಗೌಡ ಬಂಧಿತ ಆರೋಪಿಯಾಗಿದ್ದು, ತನ್ನ ಮಗಳನ್ನು ಟ್ಯೂಷನ್ ಟೀಚರ್ ಕರೆದೊಯ್ದಿರುವುದಾಗಿ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ರಾತ್ರಿ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು 45 ದಿನಗಳ ಬಳಿಕ ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನೀವೇನಾದ್ರೂ ಕುರಿ ಸಾಕಾಣಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಆದಾಯ ಗಳಿಕೆ ಮಾಡಬಹುದು.! ಹೇಗೆ ಗೊತ್ತಾ..?
ಇನ್ನೂ ಆರೋಪಿಯ ಮನೆ ಜಾಲಾಡಿದಾಗ ಉದ್ದೇಶಪೂರ್ವಕವಾಗಿ ಮೊಬೈಲ್ ಬಿಟ್ಟುಹೋಗಿರುವುದನ್ನು ಕಂಡುಕೊಂಡಿದ್ದರು. ಒಂದು ವರ್ಷದಿಂದ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಹಾಗೂ ಮದುವೆಯಾಗಿರುವ ಬಗೆಗಿನ ವಿಡಿಯೋ ಮೊಬೈಲ್ನಲ್ಲಿ ಇರುವುದನ್ನು ಪೊಲೀಸರು ಗಮನಿಸಿದ್ದರು.
ಆರೋಪಿ ಹಾಗೂ ಬಾಲಕಿ ಬಳಿ ಮೊಬೈಲ್ ಇರದ ಕಾರಣ ಆರಂಭದಲ್ಲಿ ಪೊಲೀಸರಿಗೆ ಪತ್ತೆ ಹಚ್ಚುವುದು ಕಷ್ಟವಾಗಿತ್ತು. ದಾರಿಯಲ್ಲಿ ಆರೋಪಿ ಆಕೆಯನ್ನು ಕರೆದುಕೊಂಡು ಹೋಗಿರುವ ಬಗ್ಗೆ ಸಿಸಿಟಿವಿ ಕ್ಯಾಮರಾ ಮೂಲಕ ಖಚಿತಪಡಿಸಿದ್ದರು. ಪೊಲೀಸರಿಗೆ ತಾವಿರುವ ಬಗ್ಗೆ ಗೊತ್ತಾಗದಿರಲು ಆರೋಪಿ ಮನೆಯಲ್ಲೇ ಮೊಬೈಲ್ ಬಿಟ್ಟುಹೋಗಿದ್ದ. ಅಲ್ಲದೇ ಹೋಗುವಾಗ 70 ಸಾವಿರ ರೂಪಾಯಿ ಹಣ ತೆಗೆದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಘೋಷಿಸಲಾಗಿತ್ತು.