ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಹೀಗಾಗಿ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ವಸತಿ ಶಾಲೆಯ ಬಳಿ ಜನ ಪೋಷಕರು ಜಮಾಯಿಸುತ್ತಿದ್ದಾರೆ. ನೂರಾರು ಪೋಷಕರು ಶಾಲೆಯತ್ತ ಧಾವಿಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಶಾಲೆಗೆ ಮುಳಬಾಗಿಲು ತಹಶೀಲ್ದಾರ್ ಗೀತಾ ಸಹ ಭೇಟಿ ನೀಡಿ, ಶಾಲಾ ಆಡಳಿತ ಮಂಡಳಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಸತಿ ಶಾಲೆ ವಿದ್ಯಾರ್ಥಿಗಳು
ಕೊತ್ತೂರು ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 260 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಭಾನುವಾಋ ಭಾನುವಾರ 54 ಮಂದಿ ವಿದ್ಯಾರ್ಥಿಗಳು, 6 ಶಿಕ್ಷಕರು ಶಾಲಾ ಶೈಕ್ಷಣಿಕ ಪ್ರವಾಸಕ್ಕೆಂದು ಹೋಗಿದ್ದರು.
ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳು ನೀರುಪಾಲು- ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ
ಆಟವಾಡುತ್ತಿದ್ದ ವೇಳೆ ನಾಲ್ವರು ಸಮುದ್ರ ಪಾಲು!
ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಮೃತಳು 15 ವರ್ಷದ ಶ್ರಾವಂತಿ ಎಂದು ತಿಳಿದು ಬಂದಿದೆ. ಮೂರು ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಪ್ರಾಂಶುಪಾಲೆ ಶಶಿಕಲಾ ಅಮಾನತು
ಇನ್ನೂ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ಆರೋಪದ ಹಿನ್ನೆಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಶಶಿಕಲಾ ಅಮಾನತು ಮಾಡಲಾಗಿದೆ. ಅತಿಥಿ ಉಪನ್ಯಾಸಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.