ಬೆಂಗಳೂರು: ಬ್ರಿಟೀಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ (N Ravi Kumar) ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,
ಹಿಜಬ್ (Hijab) ವಿಷಯ ಇದೀಗ ಸುಪ್ರೀಂ ಕೋರ್ಟಿನಲ್ಲಿದೆ. ಇಂತಹ ಸಂದರ್ಭದಲ್ಲಿ ಹಿಜಬ್ಗೆ ಅನುಮತಿ ಕೊಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಈ ವಿಷಯ ಹಿಂದೆ ಬಿಜೆಪಿ (BJP) ಆಡಳಿತದ ಸಂದರ್ಭದಲ್ಲಿ ಹೈಕೋರ್ಟಿಗೆ ಹೋಗಿ, ಹಿಜಬ್ ಬೇಕೇ ಬೇಡವೇ ಎಂಬುದು ಸಾಕಷ್ಟು ಚರ್ಚೆ ಆಗಿತ್ತು. ಹಿಜಬ್ ಧರಿಸಬಾರದು, ಸಮವಸ್ತ್ರ ಧರಿಸಿ ಹೋಗಬೇಕೆಂದು ಹೈಕೋರ್ಟಿನಿಂದ ತೀರ್ಪು ಬಂದಿತ್ತು ಎಂದು ತಿಳಿಸಿದರು.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಆದರೆ ಶುಕ್ರವಾರ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಬ್ ಧರಿಸಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ ಎಂದು ಟೀಕಿಸಿದರು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಶಾಲಾ, ಕಾಲೇಜು, ವಿಶ್ವವಿದ್ಯಾಲಯದಲ್ಲಿ ಮತ, ಧರ್ಮ, ಜಾತಿ, ಪಂಥದ ಆಧಾರದಲ್ಲಿ ವಿದ್ಯಾರ್ಥಿಗಳು ವಿಭಜನೆ ಆಗಬಾರದು, ವಿದ್ಯಾರ್ಥಿಗಳಲ್ಲಿ ಸಾಮರಸ್ಯ, ಸಮಭಾವ, ನಾವು ನಮ್ಮವರು, ಭಾರತೀಯರು ಎಂಬ ಭಾವನೆ ಇರಬೇಕೆಂಬ ಕಾರಣಕ್ಕಾಗಿ ಸಮವಸ್ತ್ರವನ್ನು ಜಾರಿಗೊಳಿಸಿದ್ದರು ಎಂದು ವಿವರಿಸಿದರು.