ಉಡುಪಿ: ಕುಡಿದ ಅಮಲಿನಲ್ಲಿ ವಿದ್ಯಾರ್ಥಿಗಳ ಗುಂಪುಗಳು ನಡುರಸ್ತೆಯಲ್ಲೇ ಬಡಿದಾಡಿಕೊಂಡಿವೆ. ಉಡುಪಿ ಜಿಲ್ಲೆಯ ಮಣಿಪಾಲ್ನ (Manipal) ಕಾಯಿನ್ ಸರ್ಕಲ್ ಬಳಿ ಘಟನೆ ನಡೆದಿದೆ. ವಿದ್ಯಾರ್ಥಿಗಳ ಹೊಡೆದಾಟಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಮಣಿಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಾರ್ ಒಂದರ ಮುಂದೆ ಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಬಟ್ಟೆ ಹರಿದು ಹೋಗಿದೆ. ಈ ವೇಳೆ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆ.