ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಮಣ್ಣಶ್ರೇಷ್ಠಿ ಪಾರ್ಕ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದಲೇ ಮೆರವಣಿಗೆಯಲ್ಲಿ ತೆರಳಿ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ಸರ್ಕಲ್ ಮೂಲಕ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ತಲುಪಿದರು.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ಅವರೊಂದಿಗೆ ಪತ್ನಿ ತೇಜಸ್ವಿನಿ, ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್, ಮಾಜಿ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಪ್ರಮುಖರಾದ ಎಮ್.ಬಿ. ಭಾನುಪ್ರಕಾಶ್ ಉಪಸ್ಥಿತರಿದ್ದರು.