ಕಲಬುರಗಿ : ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ. ಅವರು ವಿನಾಕಾರಣ ಆರ್.ಎಸ್.ಎಸ್ ವಿಚಾರಕ್ಕೆ ಬಂದರೆ ಸರ್ವನಾಶ ಆಗ್ತಾರೆ ಎಂದು ವಿರೋಧ ಪಕ್ಷದ ನಾಯಕ ಅಶೋಕ್ ಕಿಡಿಕಾರಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನಿಂದಲೂ ಹಿಂದೂಗಳನ್ನು ವಿರೋಧಿಸಿ ಕೊಂಡೇ ಬಂದಿದ್ದಾರೆ. ದಸರಾ ಕುಸ್ತಿ ವೇಳೆ ಕೇಸರಿ ಪೇಠ ಕಿತ್ತಸೆದರು.
ಈಗ ಅವರ ಸಂಪುಟ ಸಹೋದ್ಯೋಗಿ ಜಮೀರ್ ಸ್ಪೀಕರ್ ಪೀಠಕ್ಕೆ ಧರ್ಮವನ್ನು ತಂದು ನೀಚ ರಾಜಕಾರಣ ಮಾಡುತ್ತಿದ್ದಾರೆ. ಇವೆಲ್ಲವನ್ನೂ ರಾಜ್ಯದ ಜನತೆ ಗಮನಿಸುತ್ತಾರೆ. ನಮ್ಮ ಪಕ್ಷ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಈ ಎಲ್ಲಾ ವಿಷಯಗಳ ವಿರುದ್ಧ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಸರ್ಕಾರದ ಇಲಾಖೆಗಳು ಬಿಜೆಪಿ ಅವಧಿಯಲ್ಲಿ ಆರ್ ಎಸ್ ಎಸ್ ಶಾಖೆಗಳಾಗಿದ್ದವು, ಈಗ ಅವುಗಳನ್ನು ಕ್ಲೀನ್ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಕಿಡಿ ಕಾರಿದ ಅಶೋಕ್, ಧಮ್ಮು ತಾಕತ್ತು ಇದ್ದರೆ ಮುಟ್ಟಿ ನೋಡಲಿ. ಅಂತಹ ಇಂದಿರಾಗಾಂಧಿ ಅವರ ಕೈನಲ್ಲಿ ಏನು ಮಾಡಲು ಆಗಲಿಲ್ಲ. ನಿರ್ಬಂಧ ಹೇರಿ ಹಿಂದೆ ಪಡೆದರು. ಆರ್ ಎಸ್ ಎಸ್ ವಿಷಯಕ್ಕೆ ಬಂದವರೆಲ್ಲಾ ಸರ್ವನಾಶ ಆಗಿದ್ದಾರೆ. ಇವರಿಗೂ ಅದೇ ಗತಿ ಕಾದಿದೆ ಎಂದರು.