ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಮೂಖಜೀವಿಗಳ ಮೇಲೆ ಅತ್ಯಾಚಾರ, ಹತ್ಯೆ ಅಂತಹ ಘಟನೆಗಳು ನಡೆಯುತ್ತಿರುವಾಗಲೇ ಇದೀಗ ಬೆಂಗಳೂರಿನಲ್ಲಿ ಮನುಕುಲವೇ ತಲೆ ಬಗ್ಗಿಸುವ ಘಟನೆ ನಡೆದಿದೆ.
Viral Video: ಮದುವೆ ದಿನವೇ ಕಂಠಪೂರ್ತಿ ಕುಡಿದು ಬಂದ ವರ; ಗಂಡಿನ ವರ್ತನೆಗೆ ಬೇಸತ್ತ ವಧು ಹೇಳಿದ್ದೇನು?
ಮಾತು ಬಾರದ ಹಸುಗಳ ಕೆತ್ತಲು ಕೊಯ್ದು ದುಷ್ಟರು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಜರುಗಿದೆ.
ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು ಈಗ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದ್ದಾರೆ