ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್ಗೂ ಮತ್ತು ದೇಶದಲ್ಲಿ ಸಂಭವಿಸುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ. ಹೃದಯ ಸ್ತಂಭನ ಪ್ರಕರಣಗಳ ಕುರಿತು ಮಾಹಿತಿ ನೀಡುವಾಗ, ಮಾರಣಾಂತಿಕ ಕೋವಿಡ್-19 ರೋಗಕ್ಕೆ ಲಸಿಕೆಗಳನ್ನು ತೆಗೆದುಕೊಂಡ ನಂತರ ಜನರು ಹಠಾತ್ತನೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂಬ ಐಸಿಎಂಆರ್ ಅಧ್ಯಯನ ನಡೆಸಿತು.
18 ರಿಂದ 45 ವರ್ಷ ವಯಸ್ಸಿನ ಆರೋಗ್ಯವಂತ ವಯಸ್ಕರಲ್ಲಿ ಹಠಾತ್ ಸಾವಿನ ಬಗ್ಗೆ ವರದಿ ಪ್ರಕಟಿಸಿದೆ. ಯುವಕರಲ್ಲಿ ಹಠಾತ್ ಹೃದಯಾಘಾತ ಸಂಭವಿಸುತ್ತಿದೆ. ಈ ಸಾವುಗಳಿಗೂ ಕೋವಿಡ್ ವ್ಯಾಕ್ಸಿನೇಷನ್ಗೂ ಯಾವುದೇ ಸಂಬಂಧ ಇಲ್ಲ. ಅದನ್ನು ಸಾಬೀತುಪಡಿಸಲು ಯಾವುದೇ ಪುರಾವೆ ನಮಗೆ ಕಂಡುಬಂದಿಲ್ಲ ಎಂದು ಸಂಶೋಧನಾ ತಂಡವು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಈ ರೀತಿಯ ಹಠಾತ್ ಸಾವಿಗೆ ಕುಟುಂಬದ ಹಿನ್ನೆಲೆ, ವ್ಯಕ್ತಿಯ ಜೀವನಶೈಲಿ (ಅತಿಯಾದ ಮದ್ಯಪಾನ ಮತ್ತು ತೀವ್ರ ದೈಹಿಕ ಚಟುವಟಿಕೆಯಂತಹ ಜೀವನಶೈಲಿ) ಕಾರಣವಾಗಿರಬಹುದು ಎಂದು ಹೇಳಲಾಗಿದೆ. ICMR ಸಂಶೋಧಕರು ತಮ್ಮ ಸಂಶೋಧನೆಯಲ್ಲಿ 29,171 ಅನಿರೀಕ್ಷಿತ ಸಾವುಗಳನ್ನು ಗುರುತಿಸಿದ್ದಾರೆ. ಭಾರತದಲ್ಲಿ ಕೋವಿಡ್ ಸೋಂಕಿನ 4.5 ಕೋಟಿ ಪ್ರಕರಣಗಳು ಮತ್ತು 5,33,295 ಸಾವುಗಳಾಗಿರುವುದು ಸರ್ಕಾರ ಅಂಕಿಅಂಶಗಳ ವರದಿಯಾಗಿದೆ. ನಿಜವಾದ ಅಂಕಿಅಂಶಗಳು ಗಮನಾರ್ಹವಾಗಿ ಹೆಚ್ಚಿವೆ ಎಂದು ತಜ್ಞರು ಸೂಚಿಸುತ್ತಾರೆ.