ಹಲವು ದಿನಗಳಿಂದ ಸುದೀಪ್ ಅವರ ವಾರಿಯರ್ (Warrior) ಲುಕ್ ಇರುವಂತಹ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇವೆ. ಇದು ಯಾವ ಸಿನಿಮಾದ್ದು? ಏನ್ ಕಥೆ ಎಂದು ಗೊತ್ತಾಗದೇ ಇರುವ ಕಾರಣದಿಂದಾಗಿ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಸದ್ಯ ಸುದೀಪ್ ಅಂತಹ ಸಿನಿಮಾ ಮಾಡುತ್ತಿಲ್ಲ. ಮ್ಯಾಕ್ಸ್ ಸಿನಿಮಾದಲ್ಲೂ ಅಂತಹ ಗೆಟಪ್ ಇಲ್ಲ. ಹಾಗಾಗಿ ಇದು ಜಾಹೀರಾತು ಒಂದರ ಲುಕ್ ಇರಬಹುದು ಎಂದು ಹೇಳಲಾಗುತ್ತಿದೆ.
ಈ ನಡುವೆ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ಮುಗಿಸಲಿದ್ದಾರಂತೆ.
ಮ್ಯಾಕ್ಸ್ (Max) ಸಿನಿಮಾದಲ್ಲಿ ದಕ್ಷಿಣದ ಖ್ಯಾತ ನಟಿ ವರಲಕ್ಷ್ಮಿ (Varalakshmi) ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ವರಲಕ್ಷ್ಮಿ ಭಾಗಿಯಾಗಿದ್ದಾರೆ. ಅಧಿಕೃತವಾಗಿಯೇ ಈ ಮಾಹಿತಿಯನ್ನು ಚಿತ್ರತಂಡ ಹೇಳಿಕೊಂಡಿದೆ. ‘ವೆಲ್ ಕಮ್ ಆನ್ ಬೋರ್ಡ್ ಮಹಾಲಕ್ಷ್ಮಿ’ ಎಂದು ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.