ಎಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಚಿತ್ರದ ಟೀಸರ್ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ನಾಳೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಲಿದ್ದಾರೆ. ಈ ಮೂಲಕ ದಿಗಂತ್ ಸಿನಿಮಾಗೆ ಸಾಥ್ಕೊಡಲಿದ್ದಾರೆ ಅಭಿನಯ ಚಕ್ರವರ್ತಿ.
ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗ್ಗಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್,
ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.