ರಾಜ್ಯದಲ್ಲಿ ಒಂದು ತಿಂಗಳ ನಂತರ ಸೋಂಕಿನ ಅಬ್ಬರ ಕಡಿಮೆ ಆಗಲಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿರುವುದು ಕಳವಳಕ್ಕೆ ಕಾರಣವಾಗುತ್ತಿದ್ದು, ಸದ್ಯ ಇದೀಗ ಸೋಂಕಿನ ಅಬ್ಬರ ಕೇವಲ ಒಂದೂವರೆ ತಿಂಗಳವರೆಗೆ ಮಾತ್ರ ಇರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಇನ್ನೂ ರಾಜ್ಯದ ಗಡಿ ಪ್ರದೇಶದಲ್ಲಿ ಸೂಕ್ತ ಎಚ್ಚರಿಕೆ ವಹಿಸಲಾಗುತ್ತಿದ್ದು, ವಿದೇಶ ಹಾಗೂ ಬೇರೆ ರಾಜ್ಯಗಳಿಂದ ಬಂದವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಇದಕ್ಕೆ ಸಹಕರಿಸಿದರೆ ಹೆಮ್ಮಾರಿ ವಿರುದ್ಧ ನಾವು ಹೋರಾಡಬಹುದು ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
