ನವದೆಹಲಿ: ಬರೋಬ್ಬರಿ 450 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಶುಭ್ʼಮನ್ ಗಿಲ್ ಸೇರಿದಂತೆ ಟೀಂ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೌದು ಭೂಪೇಂದ್ರಸಿನ್ಹ್ ಝಾಲಾ ನೇತೃತ್ವದ BZ ಫೈನಾನ್ಶಿಯಲ್ ಸರ್ವಿಸಸ್ ಹೆಸರಿನ ಕಂಪನಿ,
ಬ್ಯಾಂಕುಗಳಿಗಿಂತ ಹೆಚ್ಚಿನ ಬಡ್ಡಿದರ ನೀಡುವುದಾಗಿ ಹೂಡಿಕೆದಾರರಿಗೆ ಭರವಸೆ ನೀಡಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿಸಿದೆ. ಆದರೆ ಕೊಟ್ಟ ಮಾತಿನಂತೆ ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿದರ ನೀಡುವಲ್ಲಿ ಕಂಪನಿ ವಿಫಲವಾದ ಕಾರಣ ಇದೀಗ ಹೂಡಿಕೆದಾರರು ಪೊಲೀಸರಿಗೆ ದೂರು ನೀಡಿದ್ದಾರೆ.
100, 200, 500 ರೂಪಾಯಿಗಳ ನೋಟು ಅಸಲಿಯೋ? ನಕಲಿಯೋ? ಪತ್ತೆ ಹಚ್ಚುವ ವಿಧಾನಗಳು ಇಲ್ಲಿದೆ ನೋಡಿ
ಅಹಮದಾಬಾದ್ ಮಿರರ್ ವರದಿ ಪ್ರಕಾರ, ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯುವ ಆಟಗಾರರಾದ ಶುಭ್ಮನ್ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಪೊಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ.
ಈ ಕುರಿತು ಸಿಐಡಿ ಇದೀಗ ಈ ನಾಲ್ವರು ಕ್ರಿಕೆಟಿಗರನ್ನು ವಿಚಾರಣೆ ನಡೆಸಲಿದೆ. ಈ ಪ್ರಕರಣದಲ್ಲಿ ಶುಭ್ಮನ್ ಗಿಲ್ ಅಲ್ಲದೆ ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಅವರಿಗೂ ಸಿಐಡಿಯಿಂದ ಸಮನ್ಸ್ ಕಳುಹಿಸಲಾಗಿದೆ