ಮೈಸೂರು: ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಅಲಂಕರಿಸುತ್ತಿದ್ದಂತೆ ಆಕ್ಟಿವ್ ಆದ ಬೆಂಬಲಿಗರು ಪ್ರಮುಖ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕಾಗಿ ಹಾಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ರಾಜೇಂದ್ರ ಮತ್ತು ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೌಟಿಲ್ಯ ರಘು ಅವರ ನಡುವೆ ಪೈಪೋಟಿ ಆರಂಭವಾಗಿದೆ. ಇದೇ ರೀತಿ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಹುದ್ದೆಗಳಿಗೂ ಪೈಪೋಟಿ ಏರ್ಪಟ್ಟಿದೆ. ರಾಜ್ಯಾಧ್ಯಕ್ಷರ ಆಯ್ಕೆಯಾಗಿದ್ದು,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಶೀಘ್ರದಲ್ಲೇ ಪದಾಧಿಕಾರಿಗಳ ನೇಮಕ ಕೂಡ ಆಗಲಿದೆ. ಸದ್ಯ ನಗರಧ್ಯಕ್ಷರಾಗಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿರುವ ಟಿ ಎಸ್ ಶ್ರೀವತ್ಸ ಸ್ಥಾನ ತುಂಬಲು ತೆರೆ ಮರೆಯಲ್ಲಿ ಹಲವರಿಂದ ಪೈಪೋಟಿ ನಡೆಯುತ್ತಿದೆ. ಒಟ್ಟಾರೆಯಾಗಿ, ಮೈಸೂರು ಜಿಲ್ಲೆಯಲ್ಲಿ ಪ್ರತ್ಯೇಕ ಅಭಿಮಾನಿಗಳ ಪಡೆಯನ್ನೇ ಹೊಂದಿರುವ ವಿಜಯೇಂದ್ರ ಅವರು ತಮ್ಮ ತಂಡದೊಂದಿಗೆ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಮಾಲ್ ನಡೆಸಲು ತಯಾರಿ ನಡೆಸುತ್ತಿದ್ದಾರೆ.