ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಆಕ್ಷೇಪಾರ್ಹ ಪೋಸ್ಟ್ಗಳನ್ನು ಡಿಲೀಟ್ ಮಾಡಿ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ಸುಪ್ರೀಂ ಕೋರ್ಟ್ ಸುಚನೆ ನೀಡಿದೆ. ಒಂದು ವೇಳೆ ಪೋಸ್ಟ್ ಡಿಲೀಟ್ ಮಾಡಲು ಇಷ್ಟವಿಲ್ಲ ಎಂದಾದರೆ ತಮ್ಮ ಬರಹವನ್ನು ವಾಪಸ್ ಪಡೆದಿರೋದಾಗಿ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಬಹುದು ಎಂದೂ ಸುಪ್ರೀಂ ಕೋರ್ಟ್ ಡಿ. ರೂಪಾ ಅವರಿಗೆ ಸೂಚನೆ ನೀಡಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ರದ್ದುಪಡಿಸಬೇಕೆಂದು ಕೋರಿ ಡಿ. ರೂಪಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
ಪ್ರಕರಣದ ವಿಚಾರಣೆ ವೇಳೆ ತಮ್ಮ ವಾದ ಮಂಡಿಸಿದ ಡಿ. ರೂಪಾ ಪರ ವಕೀಲರು, ಪುರುಷ ಅಧಿಕಾರಿಗಳಿಗೆ ರೋಹಿಣಿ ಸಿಂಧೂರಿ ಅವರು ತಮ್ಮ ಫೋಟೋಗಳನ್ನು ಕಳಿಸುತ್ತಾರೆ ಎಂದು ಆರೋಪಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸುಪ್ರೀಂ ಕೋರ್ಟ್, ಈ ರೀತಿಯ ವಾದಗಳನ್ನು ಆಲಿಸಿ ನಾವು ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಭಾವಿಸಬೇಡಿ ಎಂದು ಹೇಳಿತು. ನಾವು ಸರ್ಕಾರದ ಆಡಳಿತ ನಡೆಸುತ್ತಿಲ್ಲ. ಜೊತೆಯಲ್ಲೇ ನ್ಯಾಯಾಲಯದಲ್ಲಿ ಭಾವನೆಗಳಿಗೆ ಯಾವುದೇ ಸ್ಥಾನವಿಲ್ಲ ಅನ್ನೋದನ್ನ ಇಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಾಕೀತು ಮಾಡಿತು.