ನವದೆಹಲಿ: ರಾಜ್ಯದಲ್ಲಿ ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಹಲಾಲ್ ಇಂಡಿಯಾ ಪ್ರೈವೆಟ್ ಲಿಮಿಟೆಡ್, ಜಮಿಯತ್ ಉಲಮಾ-ಇ-ಮಹಾರಾಷ್ಟ್ರ, ಮತ್ತು ಜಮಿಯತ್ ಉಲಮಾ ಹಲಾಲ್ ಫೌಂಡೇಶನ್ ಸರ್ಟಿಫಿಕೇಶನ್ ಪ್ರೈವೆಟ್ ಲಿಮಿಟೆಡ್ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು (Halal Certified Product) ನಿಷೇಧಿಸುವ ಉತ್ತರ ಪ್ರದೇಶ (Uttar Pradesh) ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ಇಂದು ನ್ಯಾ. ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ವಿಚಾರಣೆ ನಡೆಸಿದರು.
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ವಿಚಾರಣೆ ವೇಳೆ ನೀವೂ ಹೈಕೋರ್ಟ್ ಅನ್ನು ಮೊದಲು ಸಂಪರ್ಕಿಸಬಹುದಲ್ವೇ? ನಾವೇಕೆ ಆರ್ಟಿಕಲ್ 32ರ ಅಡಿಯಲ್ಲಿ ಮನರಂಜನೆ ನೀಡಬೇಕು? ಪ್ಯಾನ್ ಇಂಡಿಯಾ ಶಾಖೆಗಳು ಇತ್ಯಾದಿಗಳು ಉತ್ತಮವಾಗಿದೆ. ಆದರೆ ಹೈಕೋರ್ಟ್ ಅದನ್ನು ಪರಿಶೀಲಿಸಬಹುದು ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ವಕೀಲರು, ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವ ನಿರ್ಧಾರವು ರಾಷ್ಟ್ರೀಯ ಪರಿಣಾಮಗಳನ್ನು ಹೊಂದಿದೆ ಮತ್ತು ಧಾರ್ಮಿಕ ಆಚರಣೆಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಕ್ರಿಮಿನಲ್ ಹೊಣೆಗಾರಿಕೆಗೆ ಒಡ್ಡುತ್ತದೆ, ಸರ್ಕಾರದ ಈ ನಿರ್ಧಾರದಿಂದ ಅಂತರರಾಜ್ಯ ವ್ಯಾಪಾರ ಮತ್ತು ವಾಣಿಜ್ಯದ ಮೇಲೂ ಪರಿಣಾಮ ಉಂಟಾಗಿದ್ದು, ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಿಲುವು ತೆಗೆದುಕೊಳ್ಳಬೇಕು ಎಂದು ವಕೀಲರು ವಾದಿಸಿದರು.