ಮೈಸೂರು: ತಪ್ಪು ಯಾರೇ ಮಾಡಿದರೂ ತಪ್ಪೇ. ಪೊಲೀಸರು ಸೂರಜ್ ರೇವಣ್ಣ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
Rice Water: ಅನ್ನ ಬಸಿದ ಗಂಜಿ ನೀರು ಗುಟ್ಟು ತಿಳಿದ್ರೆ ಇನ್ಯಾವತ್ತು ಬಿಸಾಕುವುದಿಲ್ಲ..!
ಸೂರಜ್ ರೇವಣ್ಣ ಬಂಧನದ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ಬಗ್ಗೆ ಯುವಕನೊಬ್ಬ ದೂರು ಕೊಟ್ಟಿದ್ದಾನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಇದರಲ್ಲಿ ಯಾವುದೇ ಷಡ್ಯಂತ್ರ ಇಲ್ಲ ಎಂದರು.
ತೈಲ ಬೆಲೆ ಏರಿಕೆಗೆ ಬಿಜೆಪಿ ಕಾರಣ:
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪೆಟ್ರೋಲ್ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಯೇ ಕಾರಣ. ಚುನಾವಣೆ ಸಂದರ್ಭದಲ್ಲಿ ಕಡಿಮೆ ಮಾಡಿದರು. ಇವಾಗ ಬೆಲೆ ಏರಿಕೆ ಮಾಡಲಾಗಿದೆ ಎಂದು ಹೇಳಿದರು.