ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಪ್ರಕಾಶ ನಗರದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ ಕುಮಾರ್ ನಾಗರಿಕರನ್ನು ಭೇಟಿ ಮಾಡಿ ಕುಂದುಕೊರತೆಗಳನ್ನು ವಿಚಾರಿಸಿದಿರು. ಕ್ಷೇತ್ರದಲ್ಲಿ ಮನೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಲಭ್ಯವಾಗುತ್ತಿಲ್ಲ, ಹಾಗೂ ಕೆಲ ಮನೆಗಳಿಂದ ಕಸ ಸಂಗ್ರಹಣೆನ್ನು ಸರಿಯಾಗಿ ಮಾಡುತ್ತಿಲ್ಲವೆಂದು ಈ ವೇಳೆ ಶಾಸಕರ ಗಮನಕ್ಕೆ ಸಾರ್ವಜನಿಕರು ತಂದಿದ್ದು, ಕೂಡಲೇ ಈ ಕುರಿತು ಅಗತ್ಯ ಕ್ರಮಕೈಗೋಂಡು ಜನರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಶಾಸಕರು ಸಂಬಂದ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
