ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡಬಲ್ಲ ಇಬ್ಬರು ಕೀ ಆಟಗಾರರನ್ನು ಹೆಸರಿಸಿದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ಹೆಸರುಗಳನ್ನು ಕೈ ಬಿಟ್ಟು ಅಚ್ಚರಿ ಮೂಡಿಸಿದ್ದಾರೆ.
ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ, ಜಸ್‌ಪ್ರೀತ್ ಬುಮ್ರಾ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಇಬ್ಬರೂ ಭಾರತ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡಲಿದ್ದಾರೆಂಬ ಭರವಸೆಯನ್ನು ನೀಡಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ “ರೈಟ್ ಟು ಎಕ್ಸೆಲೆನ್ಸ್ ಸ್ಪೋರ್ಟ್ಸ್ ಸಮಿಟ್ 2023ರ’ ಕಾರ್ಯಕ್ರಮದಲ್ಲಿ ಭಾರತಕ್ಕೆ ಒಡಿಐ ವಿಶ್ವಕಪ್ ಗೆದ್ದುಕೊಡುವ ಇಬ್ಬರು ಆಟಗಾರರನ್ನು ಸುರೇಶ್ ರೈನಾ ಹೆಸರಿಸಿದ್ದಾರೆ. “ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡಬಲ್ಲ ಇಬ್ಬರು ಆಟಗಾರರನ್ನಾಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಕುಲ್ದೀಪ್ ಯಾದವ್ ಅವರನ್ನು ನಾನು ಆಯ್ಕೆ ಮಾಡುತ್ತೇನೆ,” ಎಂದು ಹೇಳಿದ್ದಾರೆ.
