ಬೆಂಗಳೂರು:- ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ
ಈ ಬಗ್ಗೆ ನಗರ ಪೊಲೀಸ್ ಆಯುಕ್ತರ ಪರವಾಗಿ ಐಪಿಎಸ್ ಅಧಿಕಾರಿ ರಮನ್ ಗುಪ್ತಾ ಅವರು ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಘಟಕಾಧಿಗಳು ವರ್ಗಾವಣೆಗೊಂಡ ಪಿಎಸ್ಐಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ನಿಯುಕ್ತಿಗೊಳಿಸಿರುವ ಸ್ಥಳಗಳಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಶಿವಪ್ಪ ಎಂ.ನಾಯ್ಕರ್-ರಾಮಮೂರ್ತಿನಗರ ಠಾಣೆ, ಶಿವಪ್ಪ -ವೈಟ್ಫೀಲ್ಡ್ ಠಾಣೆ, ರಮಾದೇವಿ ಬಿ.ಎಸ್.ಮಹದೇವಪುರ ಠಾಣೆ, ಮೂರ್ತಿ- ಮಲ್ಲೇಶ್ವರಂ ಠಾಣೆ, ಪ್ರಭುಗೌಡ ಎಸ್. ಪಾಟೀಲ್-ಆಡುಗೋಡಿ ಸಂಚಾರ ಠಾಣೆ, ವಿನೂತ್ ಎಚ್.ಎಂ.-ಬಸವನಗುಡಿ ಠಾಣೆ, ಶ್ರೀನಿವಾಸ್ ಪ್ರಸಾದ್- ಹುಳಿಮಾವು ಠಾಣೆಗೆ ಸೇರಿ 218 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.