ಬೆಂಗಳೂರು:- ಸಂಕ್ರಾಂತಿ ದಿನವಾದ ಇಂದು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಮೋಘ ದೃಶ್ಯ ಕಂಡು ಬರಲಿದೆ.
ಮಕರ ಸಂಕ್ರಾಂತಿಯ ದಿನವಾದ ಇಂದು ಪ್ರತಿವರ್ಷದಂತೆ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲಿದೆ.
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ- ಆರೋಪಿ ಅರೆಸ್ಟ್!
ಸಿಲಿಕಾನ್ ಸಿಟಿಯ ಗವಿಪುರದಲ್ಲಿನ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಇಂದು ಸಂಜೆ ನಡೆಯುವ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಇದ್ದಾರೆ.
ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವಾಗ ಸೂರ್ಯ ಕಿರಣಗಳು ದೇವಾಲಯದಲ್ಲಿನ ಶಿವ ಲಿಂಗವನ್ನು ಸ್ಪರ್ಶಿಸಲಿವೆ. ಈ ಹಿನ್ನೆಲೆಯಲ್ಲಿ ಇಂದು ಗವಿಗಂಗಾಧರ ದೇವಸ್ಥಾನದ ಶಿವಲಿಂಗಕ್ಕೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತಿದೆ. ಬೆಳ್ಳಗ್ಗೆ 5 ಗಂಟೆಗೆ ಪೂಜೆ ಆರಂಭವಾಗಿದ್ದು ಪುಷ್ಪಾಭಿಷೇಕ, ಮಹಮಂಗಳಾರತಿ, ಪಂಚಾಭೀಷೇಕ ಮಾಡಿದ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ 5.14 ರಿಂದ 5.17ರವರೆಗೆ ಒಟ್ಟು 3 ನಿಮಿಷ ಕಾಲ ಗವಿಗಂಗಾಧರೇಶ್ವರ ಸ್ವಾಮಿಯನ್ನ ಸೂರ್ಯ ರಶ್ಮಿ ಸ್ಪರ್ಶಿಸಲಿದೆ.
ಮಹಾನ್ ವಿಸ್ಮಯ ನೋಡಲು ಎಲ್ಲ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ದೇವಾಲಯದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.