ಅಹಮದಾಬಾದ್ : ರಾಮಮಂದಿರ ಸ್ಫೋಟಿಸಲು ಸಂಚು ನಡೆಸಿದ್ದರೆಂಬ ಸ್ಫೋಟಕ ಮಾಹಿತಿಯೊಂದು ಬಯಲಾಗಿದೆ. ಗುಜರಾತ್ ನ ಎಟಿಎಸ್ ಪ್ರಮುಖ ಕಾರ್ಯಾಚರಣೆ ನಡೆಸಿದ್ದು, ಶಂಕಿತ ಉಗ್ರನೋವರ್ನ ಬಂಧಿಸಿದ್ದಾರೆ.
ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್ನನ್ನು ಬಂಧಿಸಲಾಗಿದೆ. ಕೆಲವು ಪ್ರಕರಣ ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿದೆ. ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾಜಿ ಸೆಬಿ ಮುಖ್ಯಸ್ಥೆ ಸೇರಿ ಆರು ಜನರ ಮೇಲೆ ಕೇಸ್ ದಾಖಲಿಸಲು ಕೋರ್ಟ್ ಆದೇಶ
ಫರಿದಾಬಾದ್ ಪೊಲೀಸರ ಸಹಾಯದಿಂದ, ಎಟಿಎಸ್ ಸಂಪೂರ್ಣ ಶೋಧ ನಡೆಸಿ, ಸಂಭಾವ್ಯ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ. ಅಬ್ದುಲ್ ರೆಹಮಾನ್ನ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರೆದಿದೆ. ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.