ಬೆಳಗಾವಿ:- ಬೆಂಗಳೂರು ಸಹಿತ ರಾಜ್ಯದ ಎಲ್ಲ ಕಡೆ ಕಂದಾಯ ಬಡಾವಣೆಗಳ ನೋಂದಣಿಯನ್ನು ಸ್ಥಗಿತ ಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿಯ ಎಸ್.ಆರ್.ವಿಶ್ವನಾಥ್ ಪ್ರಸ್ತಾವಿಸಿದ ವಿಷಯಕ್ಕೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಕಂದಾಯ ಬಡಾವಣೆ ಗಳ ನೋಂದಣಿಯನ್ನು ಸ್ಥಗಿತಗೊಳಿಸಲಾಗುವುದು. ಈ ಸಂಬಂಧ ಸಮಿತಿ ರಚಿಸಿ ಅದರ ಬಗ್ಗೆ ನಿಗಾವಹಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಇದೇ ವಿಷಯಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ನೀಡಿರುವ ಲಿಖೀತ ಉತ್ತರದಲ್ಲೂ, ಕಂದಾಯ ನಿವೇಶನಗಳನ್ನು ನೋಂದಾಯಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ವ್ಯವಸ್ಥಿತ ಬದಲಾಣೆ ತರಲು ಇಲಾಖೆಯು ಬದ್ಧವಾಗಿದ್ದು, ಇಲಾಖೆಯಲ್ಲಿ ಇದರ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸರಕಾರದ ನಿಯಮಗಳನ್ನು ಉಲ್ಲಂಘಿಸಿ ನೋಂದಣಿ ಮಾಡಿರುವ ಉಪ ನೋಂದಣಾಧಿಕಾರಿಗಳ ವಿರುದ್ಧ ಇಲಾಖಾ ಹಂತದಲ್ಲಿ ವಿಚಾರಣೆ ಕೈಗೊಳ್ಳಲಾಗುತ್ತದೆ. ಅಲ್ಲದೆ, ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುಂದ್ರಾಂಕಗಳ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಲಾಗಿದೆ ಎಂದರು
![](https://ainlivenews.com/wp-content/uploads/2024/01/Ad-Banner-copy-scaled.jpg)