ಬೆಂಗಳೂರು:- ಪತ್ನಿ, ಅತ್ತೆಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ತಲ್ವಾರ್ನಿಂದ ದುಷ್ಕರ್ಮಿ ಅಟ್ಯಾಕ್ ಮಾಡಿದ ಘಟನೆ ರಾಜಧಾನಿ ಬೆಂಗಳೂರು ಬೆಂಗಳೂರಿನಲ್ಲಿ ಜರುಗಿದೆ.
ಬಿಎಂಟಿಸಿ ಬಸ್ ಬ್ರೇಕ್ ಫೇಲ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ!
ಆಸೀಫ್ ಬಂಧಿತ ಆರೋಪಿ. ಆಸೀಫ್ ತನ್ನ ಪತ್ನಿ ಹೀನಾ ಕೌಸರ್ ಅತ್ತೆ ಫರ್ವಿನ್ ತಾಜ್ ಮೇಲೆ ದಾಳಿ ನಡೆಸಿದ್ದಾನೆ. ಜ.14ರಂದು ಬನಶಂಕರಿ ದೇಗುಲದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
10 ವರ್ಷಗಳ ಹಿಂದೆ ತಾಯಿಯ ಅಣ್ಣನ ಮಗ ಆಸೀಫ್ನ ಜೊತೆ ಹೀನಾ ಕೌಸರ್ ಮದುವೆ ಮಾಡಲಾಗಿತ್ತು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಆದರೆ ಕಳೆದ ವರ್ಷ ಪರ ಸ್ತ್ರೀ ಸಹವಾಸ ಮಾಡಿದ ಪತಿ, ಪತ್ನಿಗೆ ಇನ್ನಿಲ್ಲದ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಕಿರುಚಾಟ ಕೇಳಿ ಅಕ್ಕಪಕ್ಕದವರು ಬರುತ್ತಿದ್ದಂತೆ ತಲ್ವಾರ್ ಬಿಟ್ಟು ಆರೋಪಿ ಪರಾರಿಯಾಗಿದ್ದ. ಗಾಯಗೊಂಡಿದ್ದ ಮಗಳು ಹಾಗೂ ತಾಯಿಯನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.