ಕೋಲಾರ: ಬೆಂಗಳೂರಿನಲ್ಲಿ ಒಕ್ಕಲಿಗರ ಸ್ವಾಮೀಜಿ ಭೇಟಿ ವಿಚಾರಕ್ಕೆ ಸಂಬಂಧಸಿದಂತೆ ಕೋಲಾರದಲ್ಲಿ ಮಾಜಿ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಆದಿಚುಂಚನಗಿರಿ ಮಠ ಎಲ್ಲ ಸಮುದಾಯಗಳನ್ನು ಪ್ರೀತಿಸುತ್ತದೆ. ಡಿ. ಕೆ. ಶಿವಕುಮಾರ್ ಭಯೋತ್ಪಾದಕರನ್ನು ಬ್ರದರ್ ಎಂದ ಬಳಿಕ ಅವರು ಒಕ್ಕಲಿಗ ನಾಯಕರಾಗಲು ಸಾಧ್ಯವಿಲ್ಲ.
ಜಾತಿ ಗಣತಿ ಹೆಸರಲ್ಲಿ ಕಾಂಗ್ರೆಸ್ ಒಕ್ಕಲಿಗ ಸಮುದಾಯಕ್ಕೆ ಯಾವ ಅನ್ಯಾಯ ಮಾಡಿದೆ ಎಂಬುದು ತಿಳಿದಿದೆ. ಡಿಸಿಎಂ ಡಿ. ಕೆ. ಶಿವಕುಮಾರ್ಗೆ ಬುದ್ಧಿ ಭ್ರಮಣೆಯಾಗಿದೆ. ಸರ್ಕಾರ ಬೀಳಿಸುವಾಗ 14 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರನ್ನು ಕಳುಹಿಸಿದ್ದೇ ಸಿದ್ದರಾಮಯ್ಯ. ಮಂಡ್ಯದಲ್ಲಿ ಕುಮಾರಸ್ವಾಮಿ ಮಗನನ್ನು ಸೋಲಿಸಿದ್ದು ನಾನೇ ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದರು.