ಭಾರತ ಕೃಷಿ ಪ್ರಧಾನ ದೇಶ. ಆದರೆ, ದೇಶದ ರೈತರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಹೊಸ ಹೊಸ ಯೋಜನೆಗಳನ್ನು ತರುತ್ತಿದ್ದು, ಇದರಿಂದ ರೈತರಿಗೆ ಅನುಕೂಲವಾಗಿದೆ. ರೈತರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಪೈಕಿ ‘ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ’ ಮಹತ್ವದ ಯೋಜನೆಯಾಗಿದೆ.
ದೀಪಾವಳಿಗೆ Samsung ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಇಲ್ಲಿದೆ ಬೆಸ್ಟ್ ಆಫರ್!
ಈ ಯೋಜನೆಯಡಿ ರೈತರು ಯಾವುದೇ ಅಡಮಾನ ಇಲ್ಲದೆ 1.60 ಲಕ್ಷ ರೂಪಾಯಿವರೆಗೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ. ಅಂದರೆ, ತಿಂಗಳಿಗೆ ಶೇ.0.5ಕ್ಕಿಂತಲೂ ಕಡಿಮೆ ಬಡ್ಡಿಗೆ ಸಾಲ ಲಭ್ಯವಾಗಲಿದೆ. ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆಯಬಹುದು? ಎಂಬ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.
ಯಾರು ಅರ್ಹರು?
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಸಂಬಂಧಿಸಿ ಆರ್ ಬಿಐ ಹೊರಡಿಸಿರುವ ಸುತ್ತೋಲೆ ಪ್ರಕಾರ ರೈತರು (ವೈಯಕ್ತಿಕ/ಜಂಟಿ ಸಾಲಗಾರರು), ಹಿಡುವಳಿ ರೈತರು, ಮೌಖಿಕ ಗೇಣಿದಾರರು ಹಾಗೂ ಪಾಲು ಬೆಳೆಗಾರರು, ರೈತರ ಸ್ವಸಹಾಯ ಗುಂಪುಗಳು ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ವಿಶೇಷತೆಗಳು
* ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರು 1.60ಲಕ್ಷ ರೂ.ನಿಂದ 3ಲಕ್ಷ ರೂ. ತನಕ ಸಾಲ ಪಡೆಯಬಹುದು.
*ಸಾಲ ಪಡೆದವರಿಗೆ ಅಪಘಾತ ವಿಮೆ ಹಾಗೂ ಆರೋಗ್ಯ ವಿಮೆ ಸೌಲಭ್ಯವಿದೆ. ಅಪಘಾತದಿಂದ ಅಂಗವೈಕಲ್ಯ ಅಥವಾ ಮೃತ್ಯುವಾದರೆ 50,000ರೂ. ಹಾಗೂ ಇತರ ಸಂದರ್ಭಗಳಲ್ಲಿ 25,000ರೂ. ವಿಮೆ ಸೌಲಭ್ಯವಿದೆ.
*ಬ್ಯಾಂಕಿನಿಂದ ನಗದು ವಿತ್ ಡ್ರಾಗೆ ಪಾಸ್ ಬುಕ್ ನೀಡಲಾಗುತ್ತದೆ.
* 25,000ರೂ. ನಗದು ಮಿತಿಯೊಂದಿಗೆ ಚೆಕ್ ಬುಕ್ ವಿತರಿಸಲಾಗುತ್ತದೆ.
*ರುಪೇ ಕ್ರೆಡಿಟ್ ಕಾರ್ಡ್ ಕೂಡ ನೀಡಲಾಗುತ್ತದೆ.
*ಸಾಲದ ಹಣದಲ್ಲಿ ರೈತರು ಬೀಜಗಳು, ರಾಸಾಯನಿಕಗಳು ಹಾಗೂ ಕೃಷಿ ಉಪಕರಣಗಳನ್ನು ಖರೀದಿಸಬಹುದು.
*ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಕ್ರೆಡಿಟ್ ಮಿತಿ ಹೆಚ್ಚಳ ಮಾಡಲಾಗುತ್ತದೆ.
*ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಬಡ್ಡಿದರಗಳ ಮೇಲೆ ಸಬ್ಸಿಡಿ ಕೂಡ ನೀಡಲಾಗುತ್ತದೆ.
*ಸಾಲ ಮೂರು ವರ್ಷಗಳ ಅವಧಿಗೆ ಲಭ್ಯವಿದೆ.
ಯಾವೆಲ್ಲ ದಾಖಲೆಗಳು ಬೇಕು?
*ಸಹಿ ಹೊಂದಿರುವ ಸಾಲದ ಮನವಿ ಪತ್ರ
*ಗುರುತು ದೃಢೀಕರಣಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಚೀಟಿ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳಲ್ಲಿ ಯಾವುದಾದರೂ ಒಂದು.
*ವಿಳಾಸ ದೃಢೀಕರಣಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರ ಚೀಟಿ ಇತ್ಯಾದಿ.
*ನಿಮ್ಮ ಪಾಸ್ ಪೋರ್ಟ್ ಗಾತ್ರದ ಫೋಟೋ
*ಸಾಲ ನೀಡುವಿಕೆಗೆ ಸಂಬಂಧಿಸಿ ಬ್ಯಾಂಕ್ ಕೋರಿರುವ ಇತರ ಅಗತ್ಯ ದಾಖಲೆಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ
ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಆನ್ ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದರೆ ಯೋನೋ ಅಪ್ಲಿಕೇಷನ್ ಮೂಲಕ ಅಥವಾ. ಎಸ್ ಬಿಐ ಯೋನೋ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು.