ಗೋಲ್ಡ್ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಚಿನ್ನದ ಬೆಲೆಯ ನಿರಂತರ ಏರಿಕೆಗೆ ಬ್ರೇಕ್ ಬಿದ್ದಿದೆ.
ಹುಬ್ಬಳ್ಳಿ: ನೇಹಾ ಹತ್ಯೆ ಆರೋಪಿಗೆ ಎನ್ಕೌಂಟರ್ ಮಾಡುವಂತೆ ಒತ್ತಾಯ
ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ತಗ್ಗಿದೆ. ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ಚಿನ್ನದ ಬೆಲೆ ತಾತ್ಕಾಲಿಕ ವಿರಾಮ ಪಡೆದುಕೊಂಡಂತಿದೆ. ಜನವರಿ 1ರಿಂದೀಚೆ ಚಿನ್ನದ ಬೆಲೆಯಲ್ಲಿ ಶೇ. 15ರಷ್ಟು ಹೆಚ್ಚಳವಾಗಿದೆ. ಏಪ್ರಿಲ್ ತಿಂಗಳ ಮೊದಲ ಮೂರು ವಾರದಲ್ಲೇ ಶೇ. 7.60ರಷ್ಟು ಚಿನ್ನದ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 23ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ