ನಿನ್ನೆ ಭರ್ಜರಿಯಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ತಣ್ಣಗಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆದರೆ, ಬೆಳ್ಳಿ ಬೆಲೆ 70 ಪೈಸೆ ಇಳಿದಿದೆ. ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ ಇದೆ. ಕೆಲ ದೇಶಗಳಲ್ಲಿ ಮಾತ್ರವೇ ತುಸು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,240 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 23ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 724 ರೂ