ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹಳೆಯ ಐಪಿಎಲ್ ನಿಯಮ ಜಾರಿಗೆ ಬಿಸಿಸಿಐ ಮುಂದಾಗಿದೆ.
Kalaburgi: ಹೆಂಡ್ತಿ ತವರು ಮನೆಗೆ; ಗಂಡ ಸಾವಿನ ಮನೆಗೆ, ಇದೆಂಥ ಟ್ರಾಜಿಡಿ..?
ಬಿಸಿಸಿಐ ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಆಟಗಾರರನ್ನು ಅನ್ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ.
ಮೊದಲ ಸೀಸನ್ನಿಂದ ಜಾರಿಯಲ್ಲಿದ್ದ ಈ ನಿಯಮವನ್ನು 2021ರಲ್ಲಿ ರದ್ದುಗೊಳಿಸಲಾಗಿತ್ತು. ಕಳೆದ ತಿಂಗಳು ಮುಂಬೈಯಲ್ಲಿ ನಡೆದಿದ್ದ ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ಮತ್ತು ಬಿಸಿಸಿಐ ನಡುವಿನ ಸಭೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಳಿತವು ಈ ನಿಯಮವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತ್ತು. ಇದೀಗ ಬಿಸಿಸಿಐ ಮತ್ತೆ ಈ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾದರೆ ಧೋನಿ ಮುಂದಿನ ಬಾರಿಯೂ ಐಪಿಎಲ್ ಆಡುವುದು ಖಚಿತ ಎನ್ನಲಾಗಿದೆ. ಅಲ್ಲದೆ ಈ ನಿಯಮ ಜಾರಿಗೊಳ್ಳಲಿದೆ ಎನ್ನುವಾಗಲೇ ಧೋನಿ ಅಭಿಮಾನಿಗಳು ಸಂತಸಗೊಂಡಿದ್ದಾರೆ.
ಧೋನಿ ಅವರು ಕಳೆದ ವರ್ಷವೇ ಐಪಿಎಲ್ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.
ಅನ್ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್ ಮಾಡಿಕೊಳ್ಳಬಹುದು. 2022ರ ಮೆಗಾ ಹರಾಜಿನ ಮೊದಲು, ಚೆನ್ನೈ 12 ಕೋಟಿಗೆ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡಿತ್ತು. “ಧೋನಿ ಅನ್ಕ್ಯಾಪ್ಡ್ ಆಟಗಾರನಾಗಿ ಆಡುತ್ತಾರಾ? ಇದೊಂದು ದೊಡ್ಡ ಪ್ರಶ್ನಾರ್ಥಕ ಚಿಹ್ನೆ” ಎಂದು ಆರ್.ಅಶ್ವಿನ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿದ್ದಾರೆ.